ಪ್ರೇಯಸಿಗೆ ಕೊಟ್ಟ ಹಣವನ್ನು ವಾಪಸ್ ಕೇಳಿದ್ದನೆಂಬ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಜ್ಯೂಸ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಸುದೀಪ್ ಹಾಗೂ ಆತನ ಸ್ನೇಹಿತ ಚೇತನ್ ಚೂರಿ ಇರಿತದಿಂದ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ.ಇಬ್ಬರೂ ಸಹ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ಠಾಣೆಯ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

