ದಿನಸಿ ಅಂಗಡಿಯೊಂದರಲ್ಲಿ ಸಾಮಾನು ಖರೀದಿಸಿ ಬಿಲ್ ನೀಡದೆ ಬಾಕಿ ಉಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕನೋರ್ವ ಅಂಗಡಿ ಬ್ಯಾನರ್‌ಗೆ ಬೆಂಕಿ ಹಚ್ಚಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.ಅರೋಪಿತನು ಸಾಮಾನು ಖರೀದಿಯ ದುಡ್ಡನ್ನು ಬಾಕಿ ಯಿರಿಸಿದ್ದು, ಅದನ್ನು ಮಾಲಕ ಕೇಳಿದ್ದಕ್ಕೆ ಕೋಪಗೊಂಡು ಈ ಕೃತ್ಯವನ್ನು ಎಸಗಿದ್ದಾನೆ. ಇದರಿಂದ 3000 ರೂ. ನಷ್ಟ ಉಂಟಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

