Breaking News

ಮಲೆಮಹದೇಶ್ವರ ದುರಂತ ಬೆನ್ನಲ್ಲೇ ಬನ್ನೇರುಘಟ್ಟದಲ್ಲಿ 3 ಹುಲಿಮರಿ ಸಾವು!

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಹಚ್ಚಹಸಿರಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿ ಮರಿಗಳು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕಳೆದ ಮೂರ್ನಾಲ್ಕು ದಿನದ ಹಿಂದೆ ಹಿಮ ಎಂಬ ಹೆಸರಿನ 7 ವರ್ಷದ ಹೆಣ್ಣು ಹುಲಿಯೊಂದು 2 ಗಂಡು ಹಾಗೂ 1 ಹೆಣ್ಣು ಸೇರಿ ಒಟ್ಟು 3 ಮರಿಗಳಿಗೆ ಜನ್ಮ ನೀಡಿತ್ತು. ಜನ್ಮ ನೀಡಿದ 3 ದಿನಗಳ ಅಂತರದಲ್ಲಿ ಮೂರೂಮರಿಗಳು ಮೃತಪಟ್ಟಿವೆ. ಆದರೆ, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ಹುಲಿ ಮರಿಗಳ ಕಳೇಬರದ ಪಂಚನಾಮೆ ಹಾಗೂ ಮರಣೋತ್ತರ ಪರೀಕ್ಷೆ ನಡೆಸದೇ ಸುಟ್ಟು ಹಾಕಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *