Breaking News

ಖ್ಯಾತ ಹಿರಿಯ ನಟ ಶ್ರೀನಿವಾಸ ರಾವ್ ನಿಧನ!

ಜನಪ್ರಿಯ ಚಲನಚಿತ್ರ ನಟ ಕೋಟ ಶ್ರೀನಿವಾಸ ರಾವ್ (83) ನಿಧನರಾಗಿದ್ದಾರೆ. ನಟ ಮತ್ತು ರಾಜಕಾರಣಿಯೂ ಆಗಿದ್ದ ಅವರು, ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕೋಟ ಶ್ರೀನಿವಾಸ ರಾವ್ ಅವರ ನಿಧನದ ಸುದ್ದಿ ಚಿತ್ರರಂಗ ಮಾತ್ರವಲ್ಲದೆ, ಅವರ ಹುಟ್ಟೂರು ವಿಜಯವಾಡದಲ್ಲಿ ಶೋಕದ ಛಾಯೆ ಆವರಿಸುವಂತೆ ಮಾಡಿದೆ.750 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕೋಟ ಶ್ರೀನಿವಾಸರಾವ್ ತೆಲುಗು ಚಿತ್ರರಂಗದ ಇತಿಹಾಸದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಖಳನಾಯಕನ ಪಾತ್ರದಲ್ಲಿ ನಟಿಸುತ್ತಾ ಹಾಸ್ಯವನ್ನು ಬೆಳೆಸಿದ ವಿಶಿಷ್ಟ ನಟ ಅವರು. 1999 ರಿಂದ 2004 ರವರೆಗೆ ವಿಜಯವಾಡ ಪೂರ್ವ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *