Breaking News

ಹೊತ್ತಿ ಉರಿದ ಇಂಧನ ಟ್ಯಾಂಕರ್! ವಂದೇ ಭಾರತ್ ಸೇರಿ 08 ರೈಲು ಸಂಚಾರ ರದ್ದು!

ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಇದರಿಂದಾಗಿ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವಿಳಂಬವಾಯಿತು. ಸುಮಾರು ಎಂಟು ರೈಲುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. ಇಂಧನ ಹೊತ್ತು ಬರುತ್ತಿದ್ದ ಲಾರಿಯೊಂದು ತಮಿಳುನಾಡಿನ ಚೆನ್ನೈನಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬರುತ್ತಿದ್ದಂತೆ ಇಂದು ಬೆಳಗಿನ ಜಾವ ದಿಢೀರ್ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ಆಕಾಶದೆತ್ತರಕ್ಕೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಪಕ್ಕದಲ್ಲೇ ಇದ್ದ ರೈಲ್ವೆ ಹಳಿ ಸುತ್ತಮುತ್ತ ಹೊಗೆ ತುಂಬಿಕೊಂಡ ಕಾರಣ, ರೈಲು ಸಂಚಾರಕ್ಕೆ ತೊಂದರೆ ಉಂಟಾಯಿತು. ಸುತ್ತಮುತ್ತಲಿನ ವಾಹನಗಳ ಸವಾರರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಉಂಟಾಯಿತು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *