ಅರುಣಾಚಲ ಪ್ರದೇಶದಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದು ತಂದು ನಂತರ ಹೊಡೆದು ಕೊಂದಿದ್ದಾರೆ. ಈ ಘಟನೆ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ನಡೆದಿದೆ. ಮೃತನನ್ನು ಕಟ್ಟಡ ಕಾರ್ಮಿಕ ಎಂದು ಹೇಳಲಾಗುತ್ತಿದೆ.ಆರೋಪಿಯನ್ನು ಪೊಲೀಸರು ಬಂಧಿಸಿ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ಶುಕ್ರವಾರ ಪೋಷಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ನುಗ್ಗಿ, ಆರೋಪಿಯನ್ನು ಹೊರಗೆ ಎಳೆದು ತೀವ್ರವಾಗಿ ಥಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಬೆಂಬಿಡದೆ ಹಿಂಬಾಲಿಸಿದ ಗುಂಪು ಮತ್ತೊಮ್ಮೆ ಆತನಿಗೆ ಥಳಿಸಿತ್ತು. ಇನ್ನು ಗಂಭೀರವಾಗಿ ಗಾಯಗೊಂಡಿದ್ದು ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

