Breaking News

ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ!

ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೆಚ್ ಒಡಿ ಹಿಂಸೆಗೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ನೊಂದ ವಿದ್ಯಾರ್ಥಿನಿ ಬೇರೆ ದಾರಿ ಕಾಣದೆ ಕಾಲೇಜಿನ ಪ್ರಾಂಶುಪಾಲರ ಕೊಠಡಿ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಶೇ.೯೫ರಷ್ಟು ಭಾಗ ಸುಟ್ಟು ಹೋಗಿದೆ. ಆಕೆಯನ್ನು ರಕ್ಷಿಸಲು ಹೋದ ಮತ್ತೋರ್ವ ವಿದ್ಯಾರ್ಥಿನಿಗೂ ಸುಟ್ಟ ಗಾಯಗಳಾಗಿವೆ. ಆಕೆಗೂ ಶೇ.೭೦ರಷ್ಟು ಭಾಗ ಸುಟ್ಟಿದೆ. ಇಬ್ಬರನ್ನೂ ಭುವನೇಶ್ವರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದೆ.

ಪ್ರಕರನದಾಖಲಿಸಿಕೊಂಡಿರುವ ಒಡಿಶಾ ಪೊಲೀಸರು ಆರೋಪಿ ಸಮೀರ್ ಕುಮಾರ್ ಸಾಹೋನನ್ನು ಹಾಗೂ ದೂರು ನೀಡಿದರೂ ಕ್ರಮ ಕೈಗೊಳ್ಳದ ಕಾಲೇಜು ಪ್ರಾಂಶುಪಾಲ ದಿಲೀಪ್ ಕುಮಾರ್ ಘೋಷ್ ನನ್ನು ಬಂಧಿಸಿದ್ದಾರೆ. ಇಬ್ಬರನ್ನೂ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *