Breaking News

ಬೀದರ್​: ಚಲಿಸುತ್ತಿದ್ದ ಬೈಕ್​ಗೆ ಹಿಂಬಂದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿ ಸಾವು!

ಬೈಕ್​ಗೆ ಹಿಂಬಂದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟಿದ್ದು ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ನಡೆದಿದೆ.ಬಸವಕಲ್ಯಾಣ ತಾಲೂಕಿನ ತಡೋಳ ಗ್ರಾಮದ ಘಾಳೆಪ್ಪ ಖರ್ಗೆ (40) ಘಟನೆಯಲ್ಲಿ ಮೃತಪಟ್ಟಿದ್ದು, ವಿಶ್ವನಾಥ್ ಅಶೋಕ ಖರ್ಗೆ ಎನ್ನುವವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುವನ್ನು ಹುಮನಾಬಾದನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.ಸುದ್ದಿ ತಿಳಿದ ಸಂಚಾರಿ ಠಾಣೆ ಪಿಎಸ್‌ಐ ಸಿದ್ದೇಶ್ವರ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ‌ ಮುಂದುವರೆದಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *