Breaking News

ಗದಗ :ಲಾರಿ, ಬಸ್ ಮತ್ತು ಕಾರು ನಡುವೆ ಸರಣಿ ಅಪಘಾತ !

ಲಾರಿ, ಬಸ್ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಸ್ವಲ್ಪದರಲ್ಲೇ ಅನಾಹುತ ತಪ್ಪಿದ ಘಟನೆ ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್​ನಲ್ಲಿ ನಡೆದಿತ್ತು. ಲಾರಿ ಚಾಲಕನ ಯಡವಟ್ಟಿನಿಂದ ಸರಣಿ ಅಪಘಾತ ನಡೆದಿದೆ ಎನ್ನಲಾಗಿತ್ತು. ಸರಣಿ ಅಪಘಾತದಿಂದ ಬಸ್, ಕಾರು ಜಖಂ ಆಗಿತ್ತು. ಸಿಗ್ನಲ್ ಗಮನಿಸದೇ ಮುಂದೆ ನಿಂತಿದ್ದ ಬಸ್​ಗೆ ಮೊದಲು ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಬಸ್, ಕಾರಗೆ ಡಿಕ್ಕಿ ಹೊಡೆದಿದ್ದು, ಎರಡು ವಾಹನಗಳು ಜಖಂ ಆಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *