Breaking News

ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ!

ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಗ್ಗೆ 11 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.ಬಿ.ಸರೋಜಾ ದೇವಿ ಅವರು 1938 ಜನವರಿ 7ರಂದು ಜನಿಸಿದ್ದಾರೆ. 17ನೇ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಸರೋಜದೇವಿ ಕಾಲಿಟ್ಟಿದ್ದಾರೆ. ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಸರೋಜಾದೇವಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹಿರಿಯ ನಟಿ ಸರೋಜಾ ದೇವಿ ಅವರಿಗೆ ಹಲವು ಪ್ರಶಸ್ತಿಗಳು ಕೂಡ ಲಭಿಸಿತ್ತು. 1969ರಲ್ಲಿ ಪದ್ಮಶ್ರೀ ಆತ್ಮ 1992 ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *