ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಿಂಬದಿ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಸವಾರನಿಗೆ ಸಣ್ಣ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಆಡುಗೋಡಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕ ಹಾಗೂ ಕ್ಯಾಂಟರ್ ಅನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

