ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಜಲಪಾತಕ್ಕೆ ಉರುಳಿದ ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು, ಜಲಪಾತದ ದರ್ಶನಕ್ಕಾಗಿ ನಿಲ್ಲಿಸಿದ್ದ ಸಂದರ್ಭದಲ್ಲೇ ಚಾಲಕನ ನಿಯಂತ್ರಣ ತಪ್ಪಿ ಕಾರು ಕಿಡಿಗೇಡಿಯಾಗಿ ಪಾಲ್ಸ್‌ಗೆ ಉರುಳಿತು. ಅದೃಷ್ಟವಶಾತ್ ಯಾವುದೇ ಭಾರಿ ಅನಾಹುತ ಸಂಭವಿಸದೇ, ಕಾರಿನಲ್ಲಿ ಇದ್ದ ಪ್ರಯಾಣಿಕರು ಅಪಾಯದಿಂದ ಪಾರಾದರು. ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ.ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

