Breaking News

ಆಂಧ್ರಪ್ರದೇಶ: ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ!

ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಕಟ್ಟಾ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್ ಮೇಲೆ ಬಿದ್ದಾಗ ಇದು ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಘಟನೆ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್​ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದು, ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳ ಬಳಿ ಮಾತನಾಡಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *