Breaking News

Hubli:ಶಕ್ತಿ ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ: ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಆಚರಣೆ..!

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಶಕ್ತಿ ಯೋಜನೆಯು ಈಗ ಕೋಟ್ಯಾಂತರ ಮಹಿಳೆಯರನ್ನು ತಲುಪಿದ್ದು, ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಸಚಿವರು ಬಸ್ಸುಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು. ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿ, ಯೋಜನೆ ಯಶಸ್ವಿಯಾಗಿಸಿದ ಹಿನ್ನೆಲೆಯಲ್ಲಿ ಸರಕಾರಿ ಬಸ್ ಪೂಜಾ ಹಾಗೂ ಸಿಹಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೊನರೆಡ್ಡಿ, ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಪೂಜೆ ಸಲ್ಲಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಇನ್ನೂ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು, ಗ್ಯಾರಂಟಿ ಯೋಜನಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ, ಜಿಲ್ಲಾ ಅಧ್ಯಕ್ಷ, ಸದಸ್ಯರು, ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *