ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಏನೆಲ್ಲಾ ಭರವಸೆಯನ್ನು ಕೊಟ್ಟಿತ್ತು. ಅದನ್ನು ನಾವು ಈಡೇರಿಸಿದ್ದೇವೆ. ಕಾಂಗ್ರೆಸ್ ಇತಿಹಾಸದಲಿಯೇ 500 ಕೋಟಿ ಮಹಿಳೆಯರ ಉಚಿತ ಪ್ರಯಾಣ ಮಾಡಿರುವುದು ವಿಶೇಷವಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯನವರ ನೇತೃತ್ವದ ಸರ್ಕಾರ ಕೋಟ್ಯಾಂತರ ಮಹಿಳೆಯರಿಗೆ ಉಚಿತ ಪ್ರಯಾಣದ ಜೊತೆಗೆ ಸಾಕಷ್ಟು ಉದ್ಯೋಗ ತುಂಬಿಕೊಳ್ಳುವ ಕಾರ್ಯವನ್ನು ಮಾಡಿದೆ. ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ ಎಂದರು. ಶಕ್ತಿ ಯೋಜನೆಗೆ 12000 ಕೋಟಿ ಸರ್ಕಾರ ಖರ್ಚು ಮಾಡಿದೆ. 5600 ಬಸ್ ಖರೀದಿಗೆ ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

