2003ರಲ್ಲಿ ಬಾವಿ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ.ಕ್ರಿಮಿನಲ್ ಮೇಲ್ಮನವಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಎನ್.ಕೆ. ಸಿಂಗ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ಆದೇಶಿಸಿದೆ.
ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್ ಅವರನ್ನು ಕೊಲೆ ಮಾಡಿರುವುದು ಎಲ್ಲ ಸಾಕ್ಷ್ಯಧಾರಗಳಿಂದ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಹೈಕೋರ್ಟ್ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಲಾಗುತ್ತಿದೆ ಎಂದು ಸುಪ್ರಿಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

