Breaking News

ಕೊಪ್ಪಳ: ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ!!

ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *