ಮೂಡುಬಿದಿರೆ ಖಾಸಗಿ ಕಾಲೇಜಿನ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಎನ್ನುವ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿ ಗೆಳೆಯ ಅನೂಪ್ ಎನ್ನುವ ಮೂವರಿಂದ ಅತ್ಯಾಚಾರ ಎಸಗಲಾಗಿದೆ.ಇದನ್ನೇ ದುರುಪಯೋಗಪಡಿಸಿಕೊಂಡ ಸಂದೀಪ್ ವಿದ್ಯಾರ್ಥಿನಿಗೇ ಹೆದರಿಸಿ ಬ್ಲಾಕ್ ಮೇಲ್ ಮಾಡಿ ನನ್ನ ಬಳಿ ಫೋಟೋ, ವಿಡಿಯೋ ಇದೆ ಎಂದು ಹೆದರಿಸಿ ಮತ್ತೆ ಸಂದೀಪ್ ಅತ್ಯಾಚಾರ ಎಸುಗುತ್ತಾನೆ. ಇದಾದ ಬಳಿಕ ಮಾರತಹಳ್ಳಿಯ ವಿದ್ಯಾರ್ಥಿನಿಯ ಗೆಳೆಯನಾಗಿರುವ ಅನೂಪ್ ಎನ್ನುವ ಕಾಮುಕ ಕೂಡ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗುತ್ತಾನೆm ಈ ವಿಚಾರ ವಿದ್ಯಾರ್ಥಿನಿ ಪೋಷಕರಿಗೆ ತಿಳಿಸುತ್ತಾಳೆ. ಬಳಿಕ ಮಹಿಳಾ ಆಯೋಗಕ್ಕೆ ದೂರು ನೀಡುತ್ತಾರೆ. ಮಹಿಳಾ ಆಯೋಗದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

