ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

