Breaking News

ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು.ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧೀಜಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. ತನ್ಮೂಲಕ ನಮ್ಮ ಮಹಾನ್ ದೇಶದಲ್ಲಿ ಸಮಸಮಾಜವನ್ನು ನಿರ್ಮಿಸಲು ಇದರಿಂದ ಸಾಧ್ಯವಾಗಲಿದೆ.ಕಾಂಗ್ರೆಸ್ ಪಕ್ಷ ಎಂದೆಂದಿಗೂ ಸಂವಿಧಾನಕ್ಕೆ ಬದ್ಧವಾಗಿರುತ್ತದೆ. ಅಹಿಂದ ತತ್ವವು ಎಲ್ಲರಿಗೂ ಸಮಪಾಲು, ಸಮಬಾಳು ಎಂಬುದರ ಆಧಾರವಾಗಿದೆ. ಇಂದಿನ ಕಾಲಮಾನದಲ್ಲಿ ಸಾಮಾಜಿಕ , ಆರ್ಥಿಕ, ಶೈಕ್ಷಣಿಕವಾಗಿ ಸಮಾನತೆ ಇಲ್ಲವಾಗಿದ್ದು, ಈ ನಿಟ್ಟಿನಲ್ಲಿ ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬಬೇಕಾಗಿದೆ. ನ್ಯಾಯಯೋಧ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿರುವ ಜಾತಿಗಣತಿ ಕೇವಲ ಜಾತಿಗಳ ಗಣತಿಯಾಗಿರದೇ, ಅದು ಸಾಮಾಜಿಕ , ಆರ್ಥಿಕ, ಶೈಕ್ಷಣಿಕವಾಗಿ ನಡೆಸುವ ಸಮೀಕ್ಷೆಯಾಗಿದೆ. ಹಿಂದುಳಿದ ಸಮುದಾಯಗಳಿಗೆ ಸಮಾನ ಅವಕಾಶ ಒದಗಿಸುವ ದಿಟ್ಟ ನಿರ್ಧಾರವನ್ನು ಶ್ರೀ ರಾಹುಲ್ ಗಾಂಧಿಯವರು ಕೈಗೊಂಡಿದ್ದಾರೆ ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *