ರೈಲು ಸಂಚರಿಸುವ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆಗೆ ಪ್ರಯಾಣಿಕರು ಇದೀಗ ಗುಡ್ ಬೈ ಹೇಳುವ ಟೈಂ ಬಂದಿದೆ. ಹೌದು, ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ BMRCL, ಮೆಟ್ರೋ ನಿಲ್ದಾಣಗಳಲ್ಲಿ IBS, BTS ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ.ಈ ಒಪ್ಪಂದಕ್ಕೆ ಸಂಬಂಧಿಸಿದಂತೆ, ಬಿಎಂಆರ್‌ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) ಎ.ಎಸ್. ಶಂಕರ್ ಮತ್ತು ಎಸಿಇಎಸ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಎನ್. ಮಝರ್ ಸಹಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್ ನಿರ್ದೇಶಕ ಸುಮಿತ್ ಭಟ್ನಾಗರ್ ಮತ್ತು ಎಸಿಇಎಸ್ ಸಿಇಒ ಡಾ. ಅಕ್ರಮ್ ಅಬುರಾಸ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

