Breaking News

ಕಳೆದ ಒಂದು ತಿಂಗಳಿಂದ ಆರೋಗ್ಯದಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಪ್ರಮಾಣಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ದೈಹಿಕ ಸದೃಢತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಏರ್ಪಡಿಸಿದ ಆರೋಗ್ಯ ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿ ಸುಮಾರು 400 ಕೆಜಿಗಿಂತಲೂ ಹೆಚ್ಚು ತೂಕ ಕಳೆದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.ನಗರದ ಆರ್.ಎನ್.ಶೆಟ್ಟಿ ರಸ್ತೆಯ ಮುಕುಂದನಗರದಲ್ಲಿರುವ

ಪತಂಜಲಿ ವೆಲ್ ನೆಸ್ ವಿಶ್ವ ಚೇತನ್ ಯೋಗ ಮತ್ತು ಸಂಶೋಧನಾ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಎರಡು ದಿನಗಳ ಕಾಲ ಆಯೋಜಿಸಿದ ಆರೋಗ್ಯ ಶಿಬಿರದ ಸಮಾರೋಪದಲ್ಲಿ ಸಿಬ್ಬಂದಿಯನ್ನು ಅಭಿನಂದಿಸಿ ಮಾತನಾಡಿದರು. ಪತಂಜಲಿ ಯೋಗ ಕೇಂದ್ರದ ಮುಖ್ಯಸ್ಥ ಭವರಲಾಲ್ ಆರ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲ ಠಾಣೆ ಸಿಬ್ಬಂದಿಗಳಿಗೆ ಒಂದೊಂದು ವಾರ ಉಚಿತ ಯೋಗ ತರಬೇತಿ ನೀಡಲು ನಾವು ಸಿದ್ದವಿದ್ದು, ಪೊಲೀಸ್ ಇಲಾಖೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿನಿತ್ಯ ಕರ್ತವ್ಯಕ್ಕೆ ಹೋಗುವ ಮುನ್ನ 11 ಬಾರಿ ಓಂಕಾರ ಹೇಳುವ ಮೂಲಕ ಕೆಲಸದಲ್ಲಿ ಎದುರಾಗುವ ಒತ್ತಡಗಳನ್ನು ಸುಲಭವಾಗಿ ಎದುರಿಸಬಹುದು. ಇದು ಆತ್ಮ ಸ್ಥೈರ್ಯವನ್ನು ನೀಡುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಡಿಸಿಪಿ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್, ಯಲ್ಲಪ್ಪ ಕಾಶಪ್ಪನವರ, ಉಕುಮಚಂದ ಬಾಫನಾ, ರಮೇಶ ಬಾಫನಾ, ಮುಖೇಶ ಬಾಫನಾ, ನಗರದ ವಿವಿಧ ಠಾಣೆಯ ಪೊಲೀಸರು ಉಪಸ್ಥಿತರಿದ್ದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *