ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳ ಪೈಕಿ ಒಂದಾದ ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾ*ಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ರಂದು ಪ್ರಕಟಿಸಲಿದೆ.ಸಿಐಡಿಯ ಎಸ್‌ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ಅವರು ತಮ್ಮ ವಾದ ಮತ್ತು ಅದನ್ನು ಬೆಂಬಲಿಸುವ ಕೆಲ ತೀರ್ಪಿಗೆ ಸಂಬಂಧಿಸಿದ ಲಿಖಿತ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ಸಹ ತಮ್ಮ ವಾದ ಹಾಗೂ ಇನ್ನಿತರ ದಾಖಲೆಗಳನ್ನು ಸಲ್ಲಿಸಿದರು.ಅವುಗಳನ್ನು ದಾಖಲಿಸಿಕೊಂಡ ನ್ಯಾಯಾಲಯವು ವಿಚಾರಣೆ ಪೂರ್ಣಗೊಂಡಿದ್ದು, ಜು.30ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ತಿಳಿಸಿತು. ಅಲ್ಲದೆ, ಹೊಸದಾಗಿ ಬಾಡಿ ವಾರೆಂಟ್ ಜಾರಿಗೊಳಿಸಿ ಪ್ರಜ್ವಲ್ ರೇವಣ್ಣ ಅವರನ್ನು ಜು.30ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚಿಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

