ಬೀದರ್: ಯುವತಿಯೊಬ್ಬರು ನನ್ನ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿರುವುದು ವಿರೋಧಿಗಳ ರಾಜಕೀಯ ಷಡ್ಯಂತ್ರವಾಗಿದೆ ಎಂದು ಮಾಜಿ ಸಚಿವ ಹಾಗೂ ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಸ್ಪಷ್ಟನೆ ನೀಡಿದ್ದಾರೆ. ಅದೆಷ್ಟೋ ಹೆಣ್ಣು ಮಕ್ಕಳ ಮದುವೆಯನ್ನು ಮುಂದೆ ನಿಂತು ಮಾಡುವ ನಾನು ಯಾರೊಬ್ಬರ ಕೇಡು ಬಯಸುವುದಿಲ್ಲ. ಈ ಯುವತಿ ಕೂಡ ನನಗೆ ಮಗಳಿದ್ದಂತೆ. ನನ್ನ ಬಗ್ಗೆ ಕ್ಷೇತ್ರ ಮತ್ತು ಜಿಲ್ಲೆಯ ಜನತೆಗೆ ಸರಿಯಾಗಿ ಗೊತ್ತಿದೆ ಎಂದು ಹೇಳಿದ್ದಾರೆ.
ಮಹಿಳಾ ಆಯೋಗದಿಂದ ನೋಟಿಸ್ ಬಂದಲ್ಲಿ ಅದಕ್ಕೆ ಸಾಕ್ಷಿ ಸಮೇತವಾಗಿ ಮಾಹಿತಿಯನ್ನು ಆಯೋಗಕ್ಕೆ ಒದಗಿಸಲಾಗುತ್ತದೆ. ಯುವತಿಯ ಮತ್ತು ಅವರ ಹಿಂದಿರುವ ಕಾಣದ ಕೈಗಳ ಎಲ್ಲ ಆರೋಪಗಳಿಗೂ ಕಾನೂನಾತ್ಮಕವಾಗಿಯೇ ಉತ್ತರ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

