1942ರ ಜನವರಿ 25ರಂದು ಮಂಗಳೂರಿನಲ್ಲಿ ಜನಿಸಿದ ಮಹಾಬಲೇಶ್ವರ್ ಅವರು, ಮದ್ರಾಸ್‌ನ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಪ್ರೌಢಶಿಕ್ಷಣ, ಆಂಧ್ರದ ಅನಂತಪುರದಲ್ಲಿ ಕಾಲೇಜು ಶಿಕ್ಷಣ ಮತ್ತು ತಿರುಪತಿ ಶ್ರೀವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಪದವಿ ಪಡೆದರು. 1970ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದರು.ಹೊಸಕೆರೆಹಳ್ಳಿಯ ನಿವಾಸಿ, ಭೂವಿಜ್ಞಾನ ವಿಷಯದ ನಿವೃತ್ತ ಪ್ರಾಧ್ಯಾಪಕ ಬಿ.ಮಹಾಬಲೇಶ್ವರ್ (83) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾದರು.ಮೃತರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

