ರಾಜ್ಯ ಸರ್ಕಾರ ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದೆ. ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2017 ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು.ಕನ್ನಡ ಬಾವುಟಕ್ಕೆ ಒಪ್ಪಿಗೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಮಾತಾಡುತ್ತಾರೆ. ದಯಮಾಡಿ ಕೇಂದ್ರದಿಂದ ಕನ್ನಡ ಬಾವುಟಕ್ಕೆ ಒಪ್ಪಿಗೆ ಕೊಡಿಸಲಿ. ಶಾಸ್ತ್ರೀಯ ಸ್ಥಾನಮಾನ ವಿಚಾರದಲ್ಲಿ ಅನುದಾನ ಕೊಡಿಸಲಿ. ತಮಿಳುನಾಡಿಗೆ ಹೆಚ್ಚಿನ ಅನುದಾನ ನೀಡಲಾಗುತ್ತದೆ. ಆದರೆ ಕನ್ನಡಕ್ಕಿಲ್ಲ. ಜುಲೈ ಅಂತ್ಯ ವೇಳೆಗೆ ನಿಯೋಗದ ಜತೆ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡುತ್ತೇವೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

