ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ಕರ್ನಾಟಕ ಕರಾ ವಳಿ ಭಾಗದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಗಳೂರು, ಶೃಂಗೇರಿ, ಕೊಪ್ಪ, ಕಳಸ, ಸೋಮವಾರಪೇಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಿರಿ: ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಾಗಲಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

