ಸಹೋದ್ಯೋಗಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾಪ್ರಿಯ ಅವರ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ.ಯೆಮನ್ ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆಯ ಅಧಿಕಾರಿಗಳ ಸತತ ಪ್ರಯತ್ನದ ಫಲವಾಗಿ, ಇನ್ನೇನು ನೇಣಿನ ಕುಣಿಕೆಗೆ ಕೊರಳೊಡ್ಡಬೇಕಿದ್ದ ನಿಮಿಷಾಪ್ರಿಯ ಅವರ ಮರಣದಂಡನೆಯನ್ನು ರದ್ದು ಮಾಡಲಾಗಿದೆ ಎಂದು ಸುವಾರ್ತ ಬೋಧಕ ಡಾ.ಕೆ.ಎ.ಪಾಲ್ ಅವರು ಯೆಮನ್ ದೇಶದ ಸನಾದಿಂದ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಜೈಲಿನಲ್ಲಿರುವ ನಿಮಿಷಾಪ್ರಿಯ ಅವರನ್ನು ಓಮನ್, ಜೆಡ್ಡಾ, ಈಜಿಪ್ಟ್, ಇರಾನ್ ಅಥವಾ ಟರ್ಕಿ ಮೂಲಕ ಭಾರತಕ್ಕೆ ಕರೆತರುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

