Breaking News

ನಟ ದರ್ಶನ್ ಕೇಸ್ ನಿಂದ ಹಿಂದೆ ಸರಿದ ಹಿರಿಯ ವಕೀಲ ಕಪಿಲ್ ಸಿಬಲ್.!

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಕೇಸ್ನಿಂದ ಹಿರಿಯ ವಕೀಲ ಕಪಿಲ್ ಸಿಬಲ್ ಹಿಂದೆ ಸರಿದಿದ್ದಾರೆ. ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ , ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು.ಬೇರೊಂದು ಕೋರ್ಟ್ ನಲ್ಲಿ ಕಪಿಲ್ ಸಿಬಲ್ ಬ್ಯುಸಿಯಾಗಿದ್ದಾರೆ. ಒಂದು ದಿನ ಕಾಲಾವಕಾಶ ನೀಡುವಂತೆ ಎಂದು ದರ್ಶನ್ ಪರ ಹೊಸ ವಕೀಲ ಸಿದ್ಧಾರ್ಥ ದವೆ ಮನವಿ ಮಾಡಿದರು. ಹಾಗಾಗಿ ಸುಪ್ರೀಂ ಕೋರ್ಟ್ ಜಡ್ಜ್ ಈ ಒಂದು ಅರ್ಜೆಯ ವಿಚಾರಣೆಯನ್ನು ಜುಲೈ 24ಕ್ಕೆ ಮಂದೂಡಿ ಆದೇಶ ಹೊರಡಿಸಿದರು

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *