Breaking News

ರಾಬಕೋವಿ ಹಾಲು ಒಕ್ಕೂಟದ ಅಧಿಕಾರೇತರ ಸದಸ್ಯರಾಗಿ, ರಾಘವೇಂದ್ರ ಹಿಟ್ನಾಳ ನೇಮಕ ಮಾಡಿದ ರಾಜ್ಯ ಸರ್ಕಾರ!

ರಾಬಕೋವಿ ಹಾಲು ಒಕ್ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಮೇಲುಗೈ ಸಾಧಿಸಿದ್ದು, ರಾಘವೇಂದ್ರ ಹಿಟ್ನಾಳರನ್ನು ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ. ರಾಬಕೋವಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆ ಜಿದ್ದಾಜಿದ್ದಿ ನಡೆದಿತ್ತು.ಮಾಜಿ ಶಾಸಕ ಭೀಮಾ ನಾಯಕ ವಿರುದ್ಧ ರಾಘವೇಂದ್ರ ಹಿಟ್ನಾಳ್ ಅಖಾಡಕ್ಕೆ ಇಳಿದಿದ್ದರು. ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಸಹ ಸಿಎಂ ಸಿದ್ದರಾಮಯ್ಯ ಆಪ್ತ ಎನ್ನಲಾಗಿದೆ. ಕಳೆದ ವಾರವಷ್ಟೇ ನಡೆದಿದ್ದ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡಲಾಗಿತ್ತು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *