Breaking News

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು!

ಧರ್ಮಸ್ಥಳದ ಸನಿಹ ಬೆಳಾಲು ಗ್ರಾಮದ ಕುಕ್ಕೊಟ್ಟುವಿನ ವೀಣಾ(19 ವರ್ಷ) ಎನ್ನುವ ಯುವತಿ ಅನುಮಾನಸ್ಪದವಾಗಿ ಸಾವು ಕಂಡಿರುವ ಘಟನೆ ನಡೆದಿದೆ. ಕಳೆದ ಜುಲೈ 11 ರಂದು ವೀಣಾ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.ನಾಗೇಶ್‌ ದೂರು ನೀಡಲು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಹೋಗಿದ್ದರು. ಮನೆಯವರು ಅಷ್ಟರಲ್ಲಿ ಹುಡುಕಾಟ ನಡೆಸಿದಾಗ ಕೆರೆಯ ನೀರಿನ ಆಳವಾದ ಭಾಗದಲ್ಲಿ ವೀಣಾಳ ಮೃತದೇಹ ಪತ್ತೆಯಾಗಿದೆ ಎಂದು ನಾಗೇಶ್‌ ಅವರಿಗೆ ಕರೆ ಮಾಡಿ ತಿಳಿಸಿದ್ದರು.ಬಳಿಕ ಅಗ್ನಿಶಾಮಕ ಮತ್ತು ತಂಡದವರು ಸೇರಿ ಮೃತದೇಹ ಹೊರತೆಗೆದಿದ್ದಾರೆ ಎಂದು ತಂದೆ ನಾಗೇಶ್ ತಿಳಿಸಿದ್ದಾರೆ.ಯುವತಿಯ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಮಾಡಿ ಈಕೆಯ ಸಾವಿಗೆ ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *