ರಾಜ್ಯದಲ್ಲಿ ಇಂದು ಹೃಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಇಂದು ಬೆಳಗ್ಗೆ ಅಷ್ಟೇ ಬೇಗೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ನಿಜಾಮುದ್ದೀನ್ (44) ಅವರು ತಮ್ಮ ಆಡುಗೋಡಿ ಪೊಲೀಸ್ ಕ್ವಾಟರ್ಸ್ ನಲ್ಲಿ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ರೆಡಿಯಾಗುತ್ತಿದ್ದಾಗ ದಿಢೀರ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನೆಲಮಂಗಲ ಭಕ್ತನಪಾಳ್ಯ ನಿವಾಸಿ ಸುಲೋಚನಾ (49) ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಹೃದಯಾಘಾತಕ್ಕೆ ತುಳು ರಂಗಭೂಮಿ ಹಿರಿಯ ಕಲಾವಿದರೊಬ್ಬರು ಕೊನೆಯುಸಿರೆಳೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

