ಫರೂಕಾಬಾದ್‌ನಲ್ಲಿ ಮಾವಿನ ಹಣ್ಣು ತಿನ್ನಲೆಂದು ತೋಟಕ್ಕೆ ಹೋಗಿದ್ದ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುಪಿ ಪೊಲೀಸರು ಆರೋಪಿಯನ್ನು ಎನ್ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ.ಆರೋಪಿ ಮನು ದೇಶಿ ನಿರ್ಮಿತ ಪಿಸ್ತೂಲ್ ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಸ್ವಯಂ ರಕ್ಷಣೆಗೆ ಆರೋಪಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಆರೋಪಿ ಮನು ಗಂಭೀರ ಗಾಯಗೊಂಡಿದ್ದ.
ಬಳಿಕ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈತನೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ದೃಢ ಪಟ್ಟಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

