ಬೆಂಗಳೂರು ನಂತರ ಇದೀಗ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಿ-ಖಾತಾ ಆಸ್ತಿಗಳಿಗೆ ಎ ಖಾತಾ ಅಥವಾ ಅದಕ್ಕೆ ಸಮನಾದ ಖಾತಾ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟದಲ್ಲಿ ಈ ಕುರಿತ ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆಗಳಿವೆ.ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲೂ ಜಾರಿ ಮಾಡುವ ಉದ್ದೇಶ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ । 30 ಲಕ್ಷ ಆಸ್ತಿಗೆ ಅನುಕೂಲ. ಖಾತಾ ಗೊಂದಲಕ್ಕೆ ತೆರೆಗೆ ಯತ್ನ.ಕಳೆದ ವರ್ಷ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಬಿ-ಖಾತಾಗೆ ಎ-ಖಾತಾ ಭಾಗ್ಯ ನೀಡುವ ಯೋಜನೆ ಜಾರಿ.ಈಗ ಅದೇ ಮಾದರಿಯನ್ನು ಇದೀಗ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ ಅನ್ವಯಿಸಲು ಚಿಂತನೆ. ಸಚಿವ ಈಶ್ವರ್ ಖಂಡ್ರೆ ನೇತೃತ್ವದ ಸಚಿವ ಸಂಪುಟ ಉಪಸಮಿತಿಯಲ್ಲಿ ಈ ಕುರಿತು ಧೀರ್ಘ ಚರ್ಚೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

