Breaking News

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ `ಪುನೀತ ರಾಜ್ ಕುಮಾರ ಹೃದಯಜ್ಯೋತಿ ಯೋಜನೆ’ ವಿಸ್ತರಣೆ.

ರಾಜ್ಯದಲ್ಲಿ ಹೃದಯ ಖಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಿಲ್ಲ. ಆರೋಗ್ಯ ಇಲಾಖೆಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪುನೀತ ರಾಜ್ಕುಮಾರ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದರು.ಜೂನ್ ಅಲ್ಲಿ ಬಿಡುಗಡೆಯಾದ ಗೃಹ ಆರೋಗ್ಯ ಎಂಬ ಯೋಜನೆಯು ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಚಾಲನೆ ನೀಡಲಾಗಿದೆ. ಇದು ನಮಗೆ ಮಹತ್ವಾಕಾಂಕ್ಷೆಯ ಯೋಚನೆಯಾಗಿತ್ತು. ಅದರ ಮಾಹಿತಿ ತಿಳಿದು ಇನ್ನು ಹೆಚ್ಚಾಗಿ ಬೇರೆ ಸುಧಾರಣೆ ತರಲಾಗುತ್ತದೆ ಎಂದು ಹೇಳಿದರು.ವೇದಿಕೆಯಲ್ಲಿ ಕರ್ನಾಟಕ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ. ಈಶ್ವರ ಹೊಸಮನಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಡಾ. ಅವಿನಾಶ ಮೆನನ್ ರಾಜೇಂದ್ರನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಕೆ.ವಸಂತಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಇದ್ದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *