Breaking News

ಬೆಂಗಳೂರಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ: ಹೊಸ ಘಟಕ ಸ್ಥಾಪನೆಗೆ ಬಿಬಿಎಂಪಿ ಪ್ಲಾನ್

ರಾಜಧಾನಿ ಬೆಂಗಳೂರಿನಲ್ಲಿ ನಿತ್ಯ ಸಾವಿರಾರು ಟನ್‌ ತ್ಯಾಜ್ಯ ಉತ್ಪಾದನೆ ಆಗುತ್ತದೆ. ಇದರ ವಿಲೇವಾರಿಯದ್ದೆ ಸಮಸ್ಯೆ ಇದೆ. ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿವಿಧ ಪ್ರದೇಶಗಳಲ್ಲಿ ನಿತ್ಯ ಸೃಷ್ಟಿಯಾಗುವ ಹಸಿ ಹಾಗೂ ಒಣ ಕಸದಿಂದ ವಿದ್ಯುತ್ ಉತ್ಪಾದಿಸಲು ಉತ್ತೇಜನ ನೀಡುತ್ತಿದೆ. ಈ ಸಂಬಂಧ ಹೊಸ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಸೂಚಿಸಿದರು.ಕನ್ನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಪ್ರತಿನಿತ್ಯ 350 ಮೆಟ್ರಿಕ್ ಟನ್ ತ್ಯಾಜ್ಯ ಸಂಸ್ಕರಣೆ ಮಾಡಲಾಗುತ್ತಿದೆ. ಈ ಘಟಕವನ್ನು ಖಾಸಗಿ ಸಂಸ್ಥೆಯಾದ ಸತಾರಾಂ ಮೂಲಕ ನಡೆಸಲಾಗುತ್ತಿದೆ. ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸುವ ಸಲುವಾಗಿ ಸಾಧಕ-ಭಾದಕಗಳನ್ನು ಚರ್ಚಿಸಿ ಯೋಜನೆ ರೂಪಿಬೇಕಿದೆ ಎಂದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *