Breaking News

ನಕಲಿ ಬಿಲ್​​​ ಪಾಸ್​ ಮಾಡಲು ಹಿರಿಯ ಅಧಿಕಾರಿಗಳಿಂದ ಒತ್ತಡ: ಸಾವಿಗೆ ಶರಣಾದ ಸರ್ಕಾರಿ ಇಂಜಿನಿಯರ್​!

ಸರ್ಕಾರಿ ಇಂಜಿನಿಯರ್​ ಒಬ್ಬರ ಮೃತದೇಹ ಅವರ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದ್ದು, ಡೆತ್​ನೋಟ್​ ಸಿಕ್ಕಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮೃತರನ್ನು ಜ್ಯೋತಿಷಾ ದಾಸ್​ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು.ನಕಲಿ ಬಿಲ್‌ಗಳನ್ನು ಪಾಸ್​ ಮಾಡಲು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದರಿಂದ ಸಾವಿಗೆ ಶರಣಾಗಿರುವುದಾಗಿ ಜ್ಯೋತಿಷಾ ಬರೆದಿದ್ದಾರೆ ಎನ್ನಲಾದ ಕೈಬರಹದ ಡೆತ್​ನೋಟ್​ ಪೊಲೀಸರಿಗೆ ಆಕೆಯ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ತನ್ನ ಇಬ್ಬರು ಹಿರಿಯ ಅಧಿಕಾರಿಗಳ ಹೆಸರನ್ನು ಜ್ಯೋತಿಷಾ ಉಲ್ಲೇಖಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *