ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನೀಡಿದ ತಿಂಡಿಯಲ್ಲಿ ಜಿರಳೆ ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗ್ರಾಹಕನ ವಿರುದ್ಧವೇ ದೂರು ದಾಖಲಾಗಿದೆ. ಆ ವ್ಯಕ್ತಿಯೇ ಪೊಂಗಲ್ ತಿಂಡಿಯಲ್ಲಿ ಹುಳು ಇಟ್ಟಿದ್ದಾರೆ ಎಂದು ಕೆಫೆ ಮಾಲೀಕರು ವಾದಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮೇಶ್ವರಂ ಕೆಫೆ ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಗ್ರಾಹಕರು ಆಹಾರ ಮಾಲಿನ್ಯದ ಬಗ್ಗೆ ಸುಳ್ಳು ಆರೋಪ ಹೊರಿಸುತ್ತಿದ್ದು, ಈ ಮೂಲಕ ಬ್ರ್ಯಾಂಡ್ಮೇಲ್ಗೆ ಹಾನಿ ಮಾಡಲು ಹೊರಟಿದ್ದಾರೆ. ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ಗ್ರಾಹಕನ ವಿರುದ್ಧ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

