ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಅನೆಗಳ ಪಟ್ಟಿಯನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡಗಡೆ ಮಾಡಿದರು.ಸತತ ಐದನೇ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ತಾಯಿ ವಿಗ್ರಹವಿರುವ ಸುಮಾರು 750 ಕೆಜಿ ತೂಕದ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಲಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

