Breaking News

ಫ್ರಿಡ್ಜ್‌ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಓರ್ವ ಸಾವು; ಮೂವರ ಸ್ಥಿತಿ ಗಂಭೀರ

ಫ್ರಿಡ್ಜ್‌ನಲ್ಲಿಟ್ಟ ಮಾಂಸಾಹಾರ ಸೇವಿಸಿ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಒಟ್ಟು 9 ಜನರಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯ್ಸನ್ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.ಮರುದಿನ ಶ್ರೀನಿವಾಸ್ ಯಾದವ್ ಕುಟುಂಬ ಉಳಿದ ಮಾಂಸವನ್ನು ಬಿಸಿ ಮಾಡಿ ತಿಂದಿದೆ. ಸ್ವಲ್ಪ ಸಮಯದಲ್ಲೇ ಕುಟುಂಬದ 9 ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತು. ಕೂಡಲೇ ಎಲ್ಲರನ್ನೂ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಲಾಗಿದೆ.ಸದ್ಯದ ಮಾಹಿತಿ ಪ್ರಕಾರ, ಫುಡ್‌ ಪಾಯಿಸನ್‌ನಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಪೋಸ್ಟ್‌ಮಾರ್ಟಮ್ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲು ಸಾಧ್ಯ ಎಂದು ವನಸ್ಥಳಿಪುರ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *