ವಿದ್ಯಾರ್ಥಿಗಳಿಂದ ಮನಸ್ಸಿಗೆ ಬಂದಂತೆ ಡೊನೇಶನ್ ಹೆಸರಿನಲ್ಲಿ ದುಡ್ಡು ವಸೂಲಿ ಮಾಡುತ್ತಿದ್ದ ಜಿಲ್ಲೆಯ ಎರಡು ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 3 ವರ್ಷ ರದ್ದು ಮಾಡಿದೆ. ಜೊತೆಗೆ ₹30 ಲಕ್ಷ ದಂಡ ವಿಧಿಸಿದೆ’ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ತಿಳಿಸಿದರು.ದಲಿತ ವಿದ್ಯಾರ್ಥಿ ಪರಿಷತ್ ಈ ಖಾಸಗಿ ಶಿಕ್ಷಣ ಸಂಸ್ಥೆಗಳ ಡೋನೆಷನ್ ಹಾವಳಿ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತ ಬರುತ್ತಿದೆ. ದಲಿತ ವಿದ್ಯಾರ್ಥಿ ಪರಿಷತ್ ಹೋರಾಟದ ಫಲವಾಗಿ ಜಿಲ್ಲೆಯ ಎರಡು ಖಾಸಗಿ ಬಿ.ಇಡಿ ಕಾಲೇಜುಗಳ ವಿರುದ್ಧ ಕ್ರಮಜರುಗಿಸುವಲ್ಲಿ ಯಶಸ್ವಿಯಾಗಿದೆ’ ಎಂದು ಹೇಳಿದರು.ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ವಿಜಯಪುರ ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ, ಜಿಲ್ಲಾ ಸಹ ಸಂಚಾಲಕ ಮಹಾದೇವ ಚಲವಾದಿ, ಮುಖಂಡರಾದ ಸಂದೇಶ ಹಾಗೂ ಯಾಸೀನ್ ಇನಾಮದಾರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

