ಗಂಡನ ನಿರ್ಲಕ್ಷ್ಯ, ಲೈಂಗಿಕ ಕ್ರಿಯೆಯಲ್ಲಿನ ನಿರಾಸಕ್ತಿಯಿಂದ ಬೇಸತ್ತ ಆ ಮಹಿಳೆ ತನ್ನ ಕಸಿನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಕೊನೆಗೆ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾನೆಂದು ಆಕೆ ಗಂಡನನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ.ಪೊಲೀಸರ ಪ್ರಕಾರ, ಜುಲೈ 20ರ ಸಂಜೆ 4.15ರ ಸುಮಾರಿಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಗೆ ಸ್ಥಳೀಯ ಆಸ್ಪತ್ರೆಯಿಂದ ಕರೆ ಬಂದಿದ್ದು, ಮಹಿಳೆಯೊಬ್ಬರು ಮೊಹಮ್ಮದ್ ಶಾಹಿದ್ ಎಂಬ ಗುರುತಿಸಲಾದ ತನ್ನ ಪತಿಯನ್ನು ಹಲವಾರು ಇರಿತದ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ. ಆ ವ್ಯಕ್ತಿ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

