Breaking News

ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ!

ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *