ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆಯಪ್‌ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರೊಂದಿಗೆ ಬೆಂಗಳೂರಲ್ಲಿ 2ನೇ ಹಂತದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ. ಹಾಗಾಗಿ ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

