ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪರೀಕ್ಷಾ ಪದ್ದತಿಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕರಡು ನಿಯಮಾವಳಿ ಪ್ರಕಟಿಸಿದೆ. ಇನ್ಮುಂದೆ ಪಾಸ್ ಆಗಲು 35 % ಅಲ್ಲ 33 % ಪಡೆದರೆ ಸಾಕು ಎಂದು ಹೇಳಿದೆ.ಇದರಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

