ಚಿನ್ನಾಭರಣ ಮಳಿಗೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ಮಾಲಕನಿಗೆ ಪಿಸ್ತೂಲ್‍ನಿಂದ ಬೆದರಿಸಿ 180 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಮಳಿಗೆಯ ಸಿಸಿ ಕ್ಯಾಮೇರಾವನ್ನು ಪರಿಶೀಲಿಸಿದಾಗ ಮೂವರು ಪಿಸ್ತೂಲ್ ತೋರಿಸಿ ಆಭರಣ ದೋಚಿರುವುದು ಗೊತ್ತಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

