Breaking News

ನಟ ಪ್ರಥಮ್ ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ : ಡ್ರಾಗರ್ ನಿಂದ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದನೆ!

ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ. ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿದ್ದಾರೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್‌ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದಾರೆ. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದಿದ್ದಾರೆ.

ಈ ವೇಳೆ ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಛವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡ ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದಾರೆ. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *