Breaking News

ವೈದ್ಯಕೀಯ ವಿದ್ಯಾರ್ಥಿನಿ ಸಾವು! ಶಿಕ್ಷಕರ ವಿರುದ್ಧ ಕಿರುಕುಳ ಆರೋಪ..

ಉದಯಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಜಮ್ಮು ಮತ್ತು ಕಾಶ್ಮೀರದ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಶ್ವೇತಾ ರೂಮ್‌ಮೇಟ್ ಅವರು ನೇಣು ಬಿಗಿದುಕೊಂಡಿರುವುದನ್ನು ಕಂಡು ತಕ್ಷಣ ಹಾಸ್ಟೆಲ್ ಸಿಬ್ಬಂದಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸುಖೇರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರವೀಂದ್ರ ಚರಣ್ ಅವರ ಪ್ರಕಾರ, ವಿದ್ಯಾರ್ಥಿಯ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಕುಟುಂಬ ಸದಸ್ಯರು ಬಂದ ನಂತರವೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *