ವರದಕ್ಷಿಣೆಗಾಗಿ ನಡೆದ ಸಂಘರ್ಷದಲ್ಲಿ 8 ತಿಂಗಳ ಮಗುವೊಂದನ್ನು ಅದರ ತಂದೆ ತಲೆಕೆಳಗಾಗಿ ಕಾಲುಗಳಿಂದ ಹಿಡಿದು, ಸುಡುವ ಬಿಸಿಲಿನಲ್ಲಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯಲ್ಲಿ ನಡೆದಿದೆ. ಈ ಕಳವಳಕಾರಿ ವಿಡಿಯೋ ಜುಲೈ 19, 2025 ರಂದು ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಪುರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಸಾರ್ವಜನಿಕ ಶಾಂತಿ ಕದಡಿದ ಆರೋಪದಡಿ ತಂದೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

