ಭೀಮನ ಅಮವಾಸ್ಯೆಯಂದು ಗಂಡನಿಗೆ ಪೂಜೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಬಹುದೊಡ್ಡ ಸತ್ಯವೊಂದು ಬಯಲಾಗಿದೆ. ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಕಳೆದ ಗುರುವಾರ ಸ್ಪಂದನಾ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಳು.ಮದುವೆಯಾದಾಗಿನಿಂದಲೂ ಗಂಡನ ಮನೆಯವರು ಸ್ಪಂದನಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು ಎನ್ನಲಾಗಿತ್ತು. ಆರೋಪಿ ಕೂಡ ವರದಕ್ಷಿಣೆ ನೀಡುತ್ತಿದ್ದ. ಈ ಕುರಿತು ಸ್ಪಂದನಾ ತನ್ನ ತಾಯಿಗೆ ಫೋನ್ ಮಾಡಿ ತಿಳಿಸಿದ್ದಳು. ಅದಾದ ಬಳಿಕ ಸ್ಪಂದನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಪಂದನಾ ಕುಟುಂಬಸ್ಥರು ಪತಿ ಅಭಿಷೇಕ್ ಮತ್ತು ಅತ್ತೆ ಲಕ್ಷ್ಮಮ್ಮ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ FIR ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

